HomeKarnatakaBIG NEWS: ಗೋಲಿಬಾರ್ ಆದರೂ ಬಿಡಲ್ಲ; ಬೇಡಿಕೆ ಈಡೇರದಿದ್ದರೆ ನಾಳೆ ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ;...

BIG NEWS: ಗೋಲಿಬಾರ್ ಆದರೂ ಬಿಡಲ್ಲ; ಬೇಡಿಕೆ ಈಡೇರದಿದ್ದರೆ ನಾಳೆ ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ; ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

ಬೆಂಗಳೂರು: ಕಳೆದ 9 ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದ್ದು, ಪ್ರತಿಭಟನಾ ನಿರತ ಕಾರ್ಯಕರ್ತೆಯರ ಸಹನೆಯ ಕಟ್ಟೆಯೊಡೆದಿದೆ.

ಇಂದು ಸಂಜೆಯೊಳಗಾಗಿ ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗೋಲಿಬಾರ್, ಲಾಠಿಚಾರ್ಜ್ ಮಾಡಿದರೂ ಸರಿ ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಲ್ಲ, ಎಂದೋ ಸಾಯಲೇಬೇಕು ನಾಳೆಯೇ ಸಾಯುತ್ತೇವೆ. 15 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಸಂಜೆಯೊಳಗೆ ಸಿಎಂ ಸಭೆ ನಡೆಸಿ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಗಡುವು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular