HomeKarnatakaBIG NEWS: ಬಡ, ಸಾಮಾನ್ಯ ಜನರಿಗೆ ಸರ್ಕಾರದಿಂದ ಗುಡ್ ನ್ಯೂಸ್; ನಿವೇಶನ/ ಮನೆ ಕಟ್ಟಲು ಕಾನೂನು...

BIG NEWS: ಬಡ, ಸಾಮಾನ್ಯ ಜನರಿಗೆ ಸರ್ಕಾರದಿಂದ ಗುಡ್ ನ್ಯೂಸ್; ನಿವೇಶನ/ ಮನೆ ಕಟ್ಟಲು ಕಾನೂನು ಸರಳೀಕರಣ

ಬೆಂಗಳೂರು: ಬಡವರು ನಿವೇಶನ ಕೊಳ್ಳಲು ಹಾಗೂ ಗೃಹ ನಿರ್ಮಾಣ ಮಾಡಿಕೊಳ್ಳಲು ಅನುಕೂಲ ವಾಗುವಂತೆ ಕಾನೂನು ಸರಳೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಯಲಹಂಕ ತಾಲ್ಲೂಕಿನ ಅಗ್ರಹಾರಪಾಳ್ಯದಲ್ಲಿ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಲೋಕಾರ್ಪಣೆ ಮತ್ತು ವಸತಿಗಳ ಹಸ್ತಾಂತರ ಮಾಡಿ ಮಾತನಾಡಿದ ಅವರು, ಬರುವ ದಿನಗಳಲ್ಲಿ ರಾಜ್ಯದಲ್ಲಿ ಮನೆ ಕಟ್ಟುವುದು ಕಷ್ಟವಾಗಲಿದೆ. ಕಂದಾಯ ಕಾಯ್ದೆಯಲ್ಲಿ ಮನೆ ಕಟ್ಟಲು ನಿರ್ದಿಷ್ಟ ರಿಯಾಯಿತಿಗಳಿಲ್ಲ. ಭೂಮಿ ಬೆಲೆ ಹೆಚ್ಚಾಗಲು ಬೇಡಿಕೆ ಹೆಚ್ಚಾಗಿದೆ ಮತ್ತು ನಾವು ಮಾಡಿರುವ ಕಾನೂನುಗಳಿಂದ ಸಾಮಾನ್ಯ ಜನರು ನಿವೇಶನ ಖರೀದಿ ಮಾಡುವ ಪರಿಸ್ಥಿತಿಯಲ್ಲಿಲ್ಲ. ಹೀಗಾಗಿ ಮನೆ ಕಟ್ಟಲು ಅವಕಾಶ ಸಿಗುವಂತೆ ಕಾನೂನಿಗೆ ತಿದ್ದುಪಡಿ ತಂದು, ನಿರ್ಬಂಧಗಳನ್ನು ದೂರಮಾಡಿ ನೇರವಾಗಿ ಕೈಗೆಟುಕುವ ಬೆಲೆಯಲ್ಲಿ ಜಮೀನು ದೊರೆಯುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದರು.

ವಸತಿಗಾಗಿಯೇ ಜಮೀನು ಪಡೆಯಲು, ಮನೆ ಕಟ್ಟಲು ಎಲ್ಲಾ ಕಾನೂನನ್ನು ಸರಳೀಕರಣ ಮಾಡಲಾಗುವುದು.‌ ಹಾಗಾದಾಗ ಬಡವರಿಗೆ ಮನೆ ಹಾಗೂ ನಿವೇಶನ ನೀಡಬಹುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರು ವರ್ಷಗಳ ಹಿಂದೆ 15 ಲಕ್ಷ ಮನೆ ಕಟ್ಟುವುದಾಗಿ ಘೋಷಣೆಯಾಯಿತು. ಹಿಂದಿನ ಸರ್ಕಾರ ಚುನಾವಣೆ ಸಂದರ್ಭದಲ್ಲಿ 15 ಲಕ್ಷ ಮನೆ ಘೋಷಣೆ ಮಾಡಿದರು. ಅದಕ್ಕೆ ಹಣ ಮೀಸಲಿಡದೇ ಹೋದರು‌. 15 ಸಾವಿರ ಕೋಟಿ ರೂ. ಅಗತ್ಯವಿದ್ದರೆ, 3 ಸಾವಿರ ಕೋಟಿ ಮೀಸಲಿಟ್ಟರು. ಅಗತ್ಯವಿರುವಷ್ಟು ಮನೆಗಳನ್ನು ಕಟ್ಟಲು ಸಾಧ್ಯವಾಗಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ಅನುದಾನ ಒದಗಿಸಿ ಸುಮಾರು 10 ಲಕ್ಷ ಮನೆಗಳನ್ನು ಕಟ್ಟುವ ಗುರಿ ಹೊಂದಿ ಇಂದು 5 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಕೊನೆಯ ಹಂತದಲ್ಲಿ ಇದ್ದೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular