HomeKarnatakaBIG NEWS: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

BIG NEWS: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೋಟಿಮುರ ಎಂಬಲ್ಲಿ ನಡೆದಿದೆ.

9ನೇ ತರಗತಿ ವಿದ್ಯಾರ್ಥಿ ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡವನು. ರೆಡ್ ಬ್ರಿಕ್ಸ್ ಅಪಾರ್ಟ್ ಮೆಂಟ್ ನ ಜಗದೀಶ್ ಹಾಗೂ ವಿನಯಾ ದಂಪತಿಯ ಮಗ. ಜ್ಞಾನೇಶ್ ತುಂಬಾ ಮೊಬೈಲ್ ನೋಡುತ್ತಿದ್ದ ಇದರಿಂದ ತಾಯಿ ಮೊಬೈಲ್ ಹೆಚ್ಚು ಬಳಸದಂತೆ ಬುದ್ಧಿವಾದ ಹೇಳಿದ್ದಾರೆ.

ಸ್ನಾನ ಮಾಡಿಬರುವುದಾಗಿ ಹೇಳಿ ರೂಮಿನೊಳಗೆ ಹೋದ ಜ್ಞಾನೇಶ್, ರೂಮ್ ಬಾಗಿಲು ಹಾಕಿಕೊಂಡು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಂಕನವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular