HomeKarnatakaBIG NEWS: ಆತ್ಮಹತ್ಯೆಗೆ ಯತ್ನಿಸಿದ್ದ ಟೆಕ್ಕಿ ಮಹಿಳೆ ಚಿಕಿತ್ಸೆ ಫಲಿಸದೇ ಸಾವು; ಪತಿ ವಿರುದ್ಧ FIR...

BIG NEWS: ಆತ್ಮಹತ್ಯೆಗೆ ಯತ್ನಿಸಿದ್ದ ಟೆಕ್ಕಿ ಮಹಿಳೆ ಚಿಕಿತ್ಸೆ ಫಲಿಸದೇ ಸಾವು; ಪತಿ ವಿರುದ್ಧ FIR ದಾಖಲು

ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಸಾಫ್ಟ್ ವೇರ್ ಇಂಜಿನಿಯರ್ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಾಧುರಿ ಮೃತ ಮಹಿಳೆ. ಜನವರಿ 25ರಂದು ಮಾಧುರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಮನೆಯವರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಮಹಿಳೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮಾಧುರಿ ಪತಿ ಗುರುಪ್ರಸಾದ್ ಹಾಗೂ ಕುಟುಂಬದವರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. 2016ರಲ್ಲಿ ಮಾಧುರಿ ಗುರುಪ್ರಸಾದ್ ಎಂಬುವವರ ಜತೆ ವಿವಾಹವಾಗಿದ್ದರು. ದಂಪತಿಗೆ 6 ವರ್ಷದ ಮಗನಿದ್ದಾನೆ. ವೃತ್ತಿಯಲ್ಲಿ ಮಾಧುರಿ ಕೂಡ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಮಾಧುರಿ ಗರ್ಭಿಣಿಯಾದಾಗಿನಿಂದ ಗುರುಪ್ರಸಾದ್ ಕಿರುಕುಳ ನೀಡುತ್ತಿದ್ದ. ಅಲ್ಲದೇ ಗುರುಪ್ರಸಾದ್ ಗೆ ಬೇರೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಪೊಲೀಸರು ಮಾಧುರಿಯಿಂದ ಜನವರಿ 26ರಂದು ಹೇಳಿಕೆ ಪಡೆದುಕೊಂಡಿದ್ದರು. ಆಕೆಯ ದೂರಿನ ಹಿನ್ನೆಲೆಯಲ್ಲಿ ವರ್ತೂರು ಠಾಣೆಯಲ್ಲಿ ಗುರುಪ್ರಸಾದ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular