ಬೆಳಗಾವಿ: ಸಿಡಿ ಕೇಸ್ ತನಿಖೆ ಸಿಬಿಐಗೆ ಬಯಸುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಗ್ರಹಿಸಿರುವ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಗೋಕಾಕ್ ನಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಸಿಡಿ ಪ್ರಕರಣ ಇಟ್ಟುಕೊಂಡು ಹೋದರೆ ಮೂರು ಕುಟುಂಬಗಳಿಗೆ ಡ್ಯಾಮೇಜ್ ಆಗುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕ ರಮೇಶ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕುಟುಂಬಗಳಿಗೆ ಡ್ಯಾಮೇಜ್ ಆಗುತ್ತದೆ. ಎಲ್ಲಾ ದೊಡ್ಡ ಫ್ಯಾಮಿಲಿ ಇವೆ. ಸಿಡಿ ಪ್ರಕರಣ ಮುಂದುವರಿಸಬೇಡಿ. ಸಾರ್ವಜನಿಕವಾಗಿ ಟೀಕೆ ಮಾಡುವುದನ್ನು ಮೂವರು ನಿಲ್ಲಿಸಬೇಕು. ಎಲ್ಲರೂ ದೊಡ್ಡ ಮಟ್ಟಕ್ಕೆ ಬೆಳೆದಿದ್ದೀರಿ, ಇನ್ನು ಎತ್ತರಕ್ಕೆ ಬೆಳೆಯಿರಿ ಎಂದು ಹೇಳಿದ್ದಾರೆ.
ರಾಜಕೀಯವಾಗಿ ಹೋರಾಟ ಮಾಡೋಣ ಬನ್ನಿ. ಯಾರ ಮೇಲೆ ಜನರ ಪ್ರೀತಿ ಇದೆಯೋ ಅವರಿಗೆ ಜನ ಮತ ಹಾಕುತ್ತಾರೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.