HomeKarnatakaಉತ್ಸವಕ್ಕೆ ಕೋಟ್ಯಂತರ ರೂ. ಖರ್ಚು ಮಾಡಿ ಮಕ್ಕಳಿಗೆ ಸಮವಸ್ತ್ರ ನೀಡದ ಸರ್ಕಾರಕ್ಕೆ ನಾಚಿಕೆಯಾಗಬೇಕು: ಹೈಕೋರ್ಟ್ ತರಾಟೆ

ಉತ್ಸವಕ್ಕೆ ಕೋಟ್ಯಂತರ ರೂ. ಖರ್ಚು ಮಾಡಿ ಮಕ್ಕಳಿಗೆ ಸಮವಸ್ತ್ರ ನೀಡದ ಸರ್ಕಾರಕ್ಕೆ ನಾಚಿಕೆಯಾಗಬೇಕು: ಹೈಕೋರ್ಟ್ ತರಾಟೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ ಮಕ್ಕಳಿಗೆ ಕೇವಲ ಒಂದು ಜೊತೆ ಸಮವಸ್ತ್ರ ನೀಡಲಾಗಿದ್ದು, ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗಿಯ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಉತ್ಸವ ನಡೆಸಲು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಲಾಗುತ್ತದೆ. ಆದರೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮವಸ್ತ್ರ ನೀಡುತ್ತಿಲ್ಲ. ರಾಜ್ಯ ಸರ್ಕಾರ, ಅಧಿಕಾರಿಗಳಿಗೆ ನಿಜಕ್ಕೂ ನಾಚಿಕೆಯಾಗಬೇಕು. ಅಧಿಕಾರಿಗಳಿಗೆ ಮರ್ಯಾದೆ, ಆತ್ಮಸಾಕ್ಷಿ ಇಲ್ಲ. ಅವರು ಸರ್ಕಾರಿ ಶಾಲೆ ಮಕ್ಕಳಿಗೆ ಮಾನವೀಯತೆ ತೋರುತ್ತಿಲ್ಲ. ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಗೆ ಹೋಗುವುದಿಲ್ಲ. ಖಾಸಗಿ ಶಾಲೆಗಳಿಗೆ ಕಾರಿನಲ್ಲಿ ಹೋಗಿ ಬರುತ್ತಾರೆ ಎಂದು ಹೈಕೋರ್ಟ್ ಚಾಟಿ ಬೀಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳ ವಿಚಾರದಲ್ಲಿ ಮಲತಾಯಿ ಧೋರಣೆ ಸಹಿಸುವುದಿಲ್ಲ. ಸರ್ಕಾರ ಈಗಲಾದರೂ ಕಣ್ಣು ತೆರೆದು ಸಮವಸ್ತ್ರ ಒದಗಿಸಬೇಕು ಎಂದು ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಮತ್ತು ಕೆ.ಎಸ್ ಹೇಮಲೇಖಾ ಅವರಿದ್ದ ಪೀಠ ತರಾಟೆಗೆ ತೆಗೆದುಕೊಂಡಿದೆ. ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡಲು ಆದೇಶಿಸಲಾಗಿತ್ತು. 2018ರ ಹೈಕೋರ್ಟ್ ಆದೇಶ ಪಾಲನೆಯಾಗಿಲ್ಲ ಎಂದು ಕೊಪ್ಪಳದ ಮಂಜುನಾಥ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಎರಡು ವಾರದಲ್ಲಿ ಆದೇಶ ಪಾಲಿಸಲು ಹೈಕೋರ್ಟ್ ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular