HomeCrimeSHOCKING NEWS: 13 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ; ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ

SHOCKING NEWS: 13 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ; ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ

ಕಲಬುರ್ಗಿ: 13 ವರ್ಷದ ಅಪ್ರಾಪ್ರ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ನೀಚ ಕೃತ್ಯ ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿ 2 ತಿಂಗಳ ಗರ್ಭಿಣಿಯಾದಾಗ ವಿಷಯ ಬೆಳಕಿಗೆ ಬಂದಿದೆ. ಪತ್ನಿ ಮನೆಯಲ್ಲಿ ಇಲ್ಲದ ಸಮಯವನ್ನೇ ನೋಡಿಕೊಂಡು ನೀಚ ಪತಿ ತನ್ನ ಮಗಳ ಮೇಲೆಯೇ ನಿರಂತರ ಅತ್ಯಾಚಾರವೆಸಗಿದ್ದಾನೆ. ಕೆಲ ದಿನಗಳಿಂದ ಬಾಲಕಿ ತೀವ್ರ ಅನಾರೋಗ್ಯಕ್ಕೀಡಾಗಿದ್ದಾಳೆ. ನಿನ್ನೆ ಬಾಲಕಿಯನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಪಾಸಣೆ ನಡೆಸಿದಾಗ ಬಾಲಕಿ ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ. ಬಾಲಕಿಯನ್ನು ವಿಚಾರಿಸಿದಾಗ ತಂದೆಯೇ ಕೃತ್ಯವೆಸಗಿರುವುದಾಗಿ ತಿಳಿಸಿದ್ದಾಳೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಷಯ ಹೊರಬರುತ್ತಿದ್ದಂತೆ ಪಾಪಿ ಆರೋಪಿ ನಾಪತ್ತೆಯಾಗಿದು, ಆತನ ಪತ್ತೆಗಾಗಿ ಪೊಲಿಸರು ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular