HomeKarnatakaBIG NEWS: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಅನುದಾನ ಘೋಷಣೆ; ಸಿಎಂ ಬೊಮ್ಮಾಯಿ ಸಂತಸ;...

BIG NEWS: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಅನುದಾನ ಘೋಷಣೆ; ಸಿಎಂ ಬೊಮ್ಮಾಯಿ ಸಂತಸ; ಕೇಂದ್ರ ಸರ್ಕಾರಕ್ಕೆ ಧನ್ಯವಾದ ಎಂದ ಮುಖ್ಯಮಂತ್ರಿ

ಹಾವೇರಿ: ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಘೋಷಿಸಿರುವುದು ಸಂತಸದ ಸಂಗತಿ. ಪ್ರಧಾನಿ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ನಾಯಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಕೇಂದ್ರ ಸರ್ಕಾರ ಘೋಷಿಸಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಅನುದಾನ ಘೋಷಿಸಿದ್ದು ಸಂತಸ ತಂದಿದೆ. ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡುವಂತೆ ಮೊದಲೆ ಪ್ರಸ್ತಾವನೆ ಕಳುಹಿಸಿದ್ದೆವು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರಾ ಮೇಲ್ದಂಡೆ ಯೋಜನೆ ಬಹಳ ಪ್ರಮುಖವಾದ ಯೋಜನೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular