ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕ ಬಜೆಟ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, 45 ಲಕ್ಷದ 3 ಸಾವಿರದ 97 ಕೋಟಿ ಬಜೆಟ್ ಮಂಡಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ 6 ಲಕ್ಷ ಕೋಟಿ ಹೆಚ್ಚಳದ ಬಜೆಟ್. ಕೃಷಿ, ನೀರಾವರಿ, ಗ್ರಾಮೀಣಾಭಿವೃದ್ಧಿ, ಕೈಗಾರಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಬಜೆಟ್ ನಲ್ಲಿ ಯಾವುದೇ ಒತ್ತು ನೀಡಿಲ್ಲ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡುತ್ತೇನೆ ಎಂದು ಘೋಷಿಸಿದ್ದಾರೆ. ಆದ್ರೆ ಯೋಜನೆಗೆ ಇನ್ನೂ ನೋಟಿಫಿಕೇಷನ್ ಸಹ ಆಗಿಲ್ಲ. ನೋಟಿಫಿಕೇಷನ್ ಆಗಿಲ್ಲ ಅಂದ್ರೆ 1 ರೂಪಾಯಿ ಖರ್ಚೂ ಮಾಡಲಾಗಲ್ಲ. ರಾಷ್ಟ್ರೀಯ ಯೋಜನೆ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಆದರೆ ಬಜೆಟ್ ನಲ್ಲಿ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನೂ ನೀಡಿಲ್ಲ. ಕೇಂದ್ರ ಸರ್ಕಾರದ ಬಜೆಟ್ ಕನ್ನಡಿಯೊಳಗಿನ ಗಂಟು ಎಂದು ಟೀಕಿಸಿದ್ದಾರೆ.