ಬೆಂಗಳೂರು: ಕೋರ್ಟ್ ಸೂಚನೆಯಂತೆ ಎಫ್ಐಆರ್ ದಾಖಲಿಸದ ಇನ್ಸ್ಪೆಕ್ಟರ್ ಕೆ.ವೈ. ಪ್ರವೀಣ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಹೈಕೋರ್ಟ್ ನಿಂದ ಈ ಕುರಿತು ನಿರ್ದೇಶನ ನೀಡಲಾಗಿದ್ದು, ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಪ್ರವೀಣ್ ವಿರುದ್ಧ ಇಲಾಖಾ ವಿಚಾರಣೆಗೆ ನಿರ್ದೇಶನ ನೀಡಲಾಗಿದೆ.
ಕಳ್ಳತನ ಆರೋಪದ ಬಗ್ಗೆ ತನಿಖೆಗೆ ಐದೂವರೆ ತಿಂಗಳು ವಿಳಂಬ ಮಾಡಿದ್ದರು. ಠಾಣಾಧಿಕಾರಿ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕೋರ್ಟ್ ಆದೇಶದಂತೆ ಎಫ್ಐಆರ್ ದಾಖಲಿಸುವುದು ಠಾಣಾಧಿಕಾರಿಯ ಕರ್ತವ್ಯವಾಗಿದೆ. ಕರ್ತವ್ಯ ಲೋಪ ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.
ಕಳ್ಳತನ ಆರೋಪದ ಬಗ್ಗೆ ತನಿಖೆ ನಡೆಸಲು ಎಸಿಎಂಎಂ ಕೋರ್ಟ್ ಆದೇಶ ನೀಡಿದ್ದು, 2022ರ ಮೇ 4 ರಂದು ಆದೇಶ ತಲುಪಿದ್ದರೂ, ಪೊಲೀಸ್ ಇನ್ಸ್ಪೆಕ್ಟರ್ ಕೆ.ವೈ. ಪ್ರವೀಣ್ ಎಫ್ಐಆರ್ ದಾಖಲಿಸಲು 5 ತಿಂಗಳು ವಿಳಂಬ ಮಾಡಿದ್ದರು. ನಿರ್ಲಕ್ಷಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಯಾಲಯದ ಆದೇಶದಂತೆ ಎಫ್ಐಆರ್ ದಾಖಲಿಸುವುದು ಠಾಣಾಧಿಕಾರಿಯ ಕರ್ತವ್ಯವಾಗಿದೆ. ಕರ್ತವ್ಯ ಲೋಪ ಒಪ್ಪಲು ಸಾಧ್ಯವಿಲ್ಲವೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅರ್ಜಿದಾರ ಮತ್ತು ಪ್ರಕರಣದ ಆರೋಪಿ ನಡುವೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, ಅರ್ಜಿದಾರನ ಮನೆ ಬಾಗಿಲು ಮುರಿದು ವಸ್ತುಗಳನ್ನು ಕಲವು ಮಾಡಲಾಗಿತ್ತು. ಪ್ರಕರಣ ದಾಖಲಿಸಿ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿದಾರ ಖಾಸಗಿ ದೂರು ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಬಗ್ಗೆ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವಂತೆ ಕಾಟನ್ ಪೇಟೆ ಠಾಣೆ ಪೊಲೀಸರಿಗೆ ನಿರ್ದೇಶನ ನೀಡಲಾಗಿತ್ತು. ಸಂಬಂಧಿತ ವಿವರ ಪಡೆದುಕೊಂಡಿದ್ದ ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ. 5 ತಿಂಗಳ ನಂತರ ಎಫ್ಐಆರ್ ದಾಖಲಿಸಲಾಗಿತ್ತು. ವಿಳಂಬದ ಹಿನ್ನಲೆಯಲ್ಲಿ ಎಸ್ಐ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.