HomeIndiaBIG NEWS: 24 ಗಂಟೆಯಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

BIG NEWS: 24 ಗಂಟೆಯಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಚೆನ್ನೈ: ಮುಂದಿನ 24ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿ ಜಿಲ್ಲೆಗಳು, ಪುದುಚೆರಿ ಹಾಗೂ ಕಾರೈಕಲ್ ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ದಟ್ಟವಾದ ಮಂಜು ಕವಿದ ವಾತಾವರಣ, ಚಳಿ ಇದ್ದು, ಇದೀಗ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕನ್ಯಾಕುಮಾರಿ, ರಾಮನಾಥಪುರಂ,ತೂತುಕುಡಿ,ಶಿವಗಂಗೈ, ಪುದುಕೊಟ್ಟೈ, ನಾಗಪಟ್ಟಣಂ, ಕಡಲೂರು ಪ್ರದೇಶಗಳಲ್ಲಿ ಕೂಡ ಮಳೆಯಾಗಲಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಶೀತಗಾಳಿ ಮುಂದುವರೆಯಲಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular