ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸುವಂತೆ ಪಟ್ಟು ಹಿಡಿದಿರುವ ರಮೇಶ್ ಜಾರಕಿಹೊಳಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.
ರಮೇಶ್ ಜಾರಕಿಹೊಳಿ ಹಾಗೂ ಅಮಿತ್ ಶಾ ಭೇಟಿಗೆ ಮುಹೂರ್ತ ನಿಗದಿಯಾಗಿದ್ದು, ನಾಳೆ ಅಮಿತ್ ಶಾ ಭೇಟಿಯಾಗಿ ದಾಖಲೆ ಸಮೇತ ಚರ್ಚೆ ನಡೆಸಲಿದ್ದಾರೆ.
ಇಂದು ಸಂಜೆ ರಮೇಶ್ ಜಾರಕಿಹೊಳಿ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳಸಲಿದ್ದು, ನಾಳೆ ಸಂಜೆ ಗೃಹ ಸಚಿವ ಅಮಿತ್ ಶಾ ಭೇಟಿಯಾಗಲಿದ್ದಾರೆ. ಸಿಡಿ ಕೇಸ್ ವಿಚಾರವಾಗಿ ಮಾತುಕತೆ ನಡೆಸಲಿದ್ದಾರೆ. ಅಲ್ಲದೇ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಲಿದ್ದಾರೆ. ದಾಖಲೆಗಳ ಸಮೇತವಾಗಿ ಅಮಿತ್ ಶಾ ಅವರಿಗೆ ವಿವರಿಸುವ ಸಾಧ್ಯತೆ ಇದೆ.
ಒಟ್ಟಾರೆ ಸಿಡಿ ಕೇಸ್ ಸಿಬಿಐಗೆ ಹಸ್ತಾಂತರಿಸುವ ಮೂಲಕ ರಮೇಶ್ ಜಾರಕಿಹೊಳಿ ಶಪಥ ಮಾಡಿದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸೇಡು ತೀರಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.