HomeKarnatakaವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೊಲೀಸ್ ಹುದ್ದೆಗೆ ರಾಜೀನಾಮೆ...!

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೊಲೀಸ್ ಹುದ್ದೆಗೆ ರಾಜೀನಾಮೆ…!

ರಾಜ್ಯ ವಿಧಾನಸಭೆಗೆ ಮೂರ್ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಪ್ರಮುಖ ಪಕ್ಷಗಳು ಈಗಿನಿಂದಲೇ ತಯಾರಿ ನಡೆಸಿವೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ನಡೆಯುತ್ತಿದ್ದು, ಜೆಡಿಎಸ್ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.

ಇದರ ಮಧ್ಯೆ ಪೊಲೀಸ್ ಅಧಿಕಾರಿಯೊಬ್ಬರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹೇಂದ್ರ ನಾಯಕ್ ರಾಜೀನಾಮೆ ನೀಡಿದವರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹೇಂದ್ರ ನಾಯಕ್ ವಿಜಯಪುರ ಜಿಲ್ಲೆಯ ನಾಗಠಾಣ (ಮೀಸಲು) ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular