alex Certify ಭಾರತ-ಆಸ್ಟ್ರೇಲಿಯಾ ಟೆಸ್ಟ್‌ ಸರಣಿ, ಅಹಮದಾಬಾದ್‌ನಲ್ಲಿ ಪಂದ್ಯ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ: ಆಸೀಸ್‌ ಪಿಎಂಗೂ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ-ಆಸ್ಟ್ರೇಲಿಯಾ ಟೆಸ್ಟ್‌ ಸರಣಿ, ಅಹಮದಾಬಾದ್‌ನಲ್ಲಿ ಪಂದ್ಯ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ: ಆಸೀಸ್‌ ಪಿಎಂಗೂ ಆಹ್ವಾನ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿ ಫೆಬ್ರವರಿ 9 ರಿಂದ ಆರಂಭವಾಗಲಿದೆ. ಈ ಸರಣಿಯನ್ನು ಬಾರ್ಡರ್-ಗವಾಸ್ಕರ್ ಟ್ರೋಫಿ ಎಂದೂ ಕರೆಯಲಾಗುತ್ತದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (WTC ಫೈನಲ್) ಫೈನಲ್‌ ಹಿನ್ನೆಲೆಯಲ್ಲಿ ಈ ಸರಣಿ ಬಹಳ ಮುಖ್ಯ. ಸರಣಿಯ ನಾಲ್ಕನೇ ಪಂದ್ಯದ ಕುರಿತಾದ ಇಂಟ್ರೆಸ್ಟಿಂಗ್‌ ಸುದ್ದಿಯೊಂದು ಈಗ ಹೊರಬಿದ್ದಿದೆ.

ಅಹಮದಾಬಾದ್‌ನಲ್ಲಿ ನಡೆಯಲಿರುವ ಈ ಟೆಸ್ಟ್ ಪಂದ್ಯವನ್ನು ನೋಡಲು ಪ್ರಧಾನಿ ನರೇಂದ್ರ ಮೋದಿ ತೆರಳಲಿದ್ದಾರೆ.ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಅಂತಿಮ ಟೆಸ್ಟ್ ಪಂದ್ಯವನ್ನು ಮೋದಿ ವೀಕ್ಷಿಸಲಿದ್ದಾರೆ. ಅಷ್ಟೇ ಅಲ್ಲ ಪಂದ್ಯ ವೀಕ್ಷಣೆಗಾಗಿ ಆಗಮಿಸುವಂತೆ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಕೂಡ ಆಹ್ವಾನಿಸಲಾಗಿದೆ. ಆಸೀಸ್‌ ಪ್ರಧಾನಿ ಭಾರತಕ್ಕೆ ಬರಲಿದ್ದು, ಎರಡೂ ದೇಶಗಳ ಪ್ರಧಾನ ಮಂತ್ರಿಗಳು ಕ್ರೀಡಾಂಗಣದಲ್ಲಿ ಆಟಗಾರರನ್ನು ಪ್ರೋತ್ಸಾಹಿಸಲಿದ್ದಾರೆ.

ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗಳಲ್ಲಿ ಒಂದಾಗಿದೆ. ಈ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಮಾರ್ಚ್ 9ರಿಂದ ಆರಂಭವಾಗಲಿದೆ. ಈ ಕ್ರೀಡಾಂಗಣಕ್ಕೆ ಪ್ರಧಾನಿ ಮೋದಿ ಹೆಸರನ್ನು ಇಟ್ಟಿದ್ದು, ಇದೇ ಮೊದಲ ಬಾರಿಗೆ ಅವರು ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಲು ಇಲ್ಲಿಗೆ ಆಗಮಿಸಲಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿ ಆಡಲು ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬರಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಾಗ್ಪುರದಲ್ಲಿ ಆರಂಭವಾಗಲಿದೆ. ಸರಣಿಯ ಮುಂದಿನ ಮೂರು ಟೆಸ್ಟ್ ಪಂದ್ಯಗಳು ದೆಹಲಿ, ಧರ್ಮಶಾಲಾ ಮತ್ತು ಅಹಮದಾಬಾದ್‌ನಲ್ಲಿ ನಡೆಯಲಿವೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ಎಲ್ಲಾ ಪಂದ್ಯಗಳನ್ನು ಗೆಲ್ಲುವುದು ಭಾರತಕ್ಕೆ ಬಹಳ ಮುಖ್ಯವಾಗಿದೆ. ಟೀಂ ಇಂಡಿಯಾ ಈ ಎಲ್ಲಾ ಪಂದ್ಯಗಳನ್ನು ಗೆದ್ದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶಿಸುವ ಪ್ರಬಲ ಸ್ಪರ್ಧಿಯಾಗಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...