ಮಂಗಳೂರು: ಫೆ. 11 ರಂದು ದಕ್ಷಿನ ಕನ್ನಡ ಜಿಲ್ಲೆ ಪುತ್ತೂರಿಗೆ ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.
ಹೈದರಾಬಾದ್ ನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 1.10 ಕ್ಕೆ ಕೇರಳದ ಕಣ್ಣೂರು ಏರ್ಪೋರ್ಟ್ ಗೆ ಅಮಿತ್ ಶಾ ಆಗಮಿಸಲಿದ್ದಾರೆ. ಮಂಗಳೂರು ಏರ್ಪೋರ್ಟ್ ನ ರನ್ ವೇ ದುರಸ್ತಿ ಕಾರ್ಯ ಹಿನ್ನೆಲೆಯಲ್ಲಿ ಕಣ್ಣೂರು ಏರ್ಪೋರ್ಟ್ ಗೆ ಅವರು ಆಗಮಿಸಲಿದ್ದಾರೆ. ಮಧ್ಯಾಹ್ನ 1:25ಕ್ಕೆ ಕಣ್ಣೂರು ವಿಮಾನ ನಿಲ್ದಾಣದಿಂದ ಪುತ್ತೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಪುತ್ತೂರಿಗೆ ಆಗಮಿಸುವ ಅವರು ಮಧ್ಯಾಹ್ನ 1:50ಕ್ಕೆ ಈಶ್ವರ ಮಂಗಳದ ಹೆಲಿಪ್ಯಾಡ್ ಗೆ ಆಗಮಿಸುವರು.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಈಶ್ವರ ಮಂಗಳ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ನಂತರ ಕಾರ್ ಮೂಲಕ ಹನುಮಗಿರಿಗೆ ಭೇಟಿ ನೀಡಲಿದ್ದಾರೆ. ಭಾರತ ಮಾತಾ ಮಂದಿರವನ್ನು ಉದ್ಘಾಟಿಸಲಿದ್ದಾರೆ.
ಅಲ್ಲಿಂದ 2.45 ಕ್ಕೆ ಪುತ್ತೂರಿನ ದರ್ಬೆಗೆ ಆಗಮಿಸುವ ಅವರು ಮಧ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ವಿವೇಕಾನಂದ ಸಂಸ್ಥೆಗೆ ಆಗಮಿಸುವಲಿದ್ದಾರೆ. ಪುತ್ತೂರಿನ ವಿವೇಕಾನಂದ ಸಂಸ್ಥೆಗಳ ಮೈದಾನಕ್ಕೆ ತೆರಳುವರು. ಸಹಕಾರಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ದರ್ಬೆ ಕೆಮ್ಮಿಂಜೆಯಲ್ಲಿರುವ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿಗೆ ಭೇಟಿ ನೀಡುವವರು. ಪುತ್ತೂರಿನಿಂದ ಹೆಲಿಕಾಪ್ಟರ್ ನಲ್ಲಿ ಮಂಗಳೂರಿಗೆ ತೆರಳುವರು. ಮಂಗಳೂರಿನಲ್ಲಿ ಬಿಜೆಪಿ ಪ್ರಮುಖರ ಜೊತೆಗೆ ಸಭೆ ನಡೆಸಲಿದ್ದಾರೆ. ಸಭೆ ಮುಗಿಸಿ ತೆರಳಲಿದ್ದಾರೆ.
ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷದ ಕಾರ್ಯಕ್ರಮಕ್ಕೆ ಅಮಿತ್ ಶಾ ಬರುತ್ತಿದ್ದಾರೆ. ಚುನಾವಣೆ ದೃಷ್ಟಿಯಿಂದ ಅಮಿತ್ ಶಾ ಪುತ್ತೂರಿಗೆ ಬರುತ್ತಿಲ್ಲ. ಆದರೆ, ಬಿಜೆಪಿಯಿಂದ ಸ್ವಾಗತಿಸಿ ಚುನಾವಣೆ ಲಾಭ ಪಡೆದುಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.