HomeCrimeಡ್ರಗ್ಸ್‌ ಕೊಳ್ಳಲು ಹಣ ನೀಡದ್ದಕ್ಕೆ ತಂದೆಯನ್ನೇ ಕೊಂದ ಪಾಪಿ

ಡ್ರಗ್ಸ್‌ ಕೊಳ್ಳಲು ಹಣ ನೀಡದ್ದಕ್ಕೆ ತಂದೆಯನ್ನೇ ಕೊಂದ ಪಾಪಿ

ಡ್ರಗ್ಸ್ ಖರೀದಿಸಲು ತಂದೆ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ತಂದೆಯನ್ನೇ ಮಗ ಹತ್ಯೆ ಮಾಡಿರೋ ಘಟನೆ ದೆಹಲಿಯಲ್ಲಿ ನಡೆದಿದೆ. ತನ್ನ ತಂದೆಯನ್ನು ಕೊಲೆ ಮಾಡಿದ್ದಕ್ಕಾಗಿ ದೆಹಲಿಯಲ್ಲಿ ಆರೋಪಿ ಅಜಯ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಾಯುವ್ಯ ದೆಹಲಿಯ ಸುಭಾಷ್ ಪ್ಲೇಸ್‌ನಲ್ಲಿ ಈ ಘಟನೆ ನಡೆದಿದೆ.

ಹತ್ಯೆಗೀಡಾದ ವ್ಯಕ್ತಿಯನ್ನು ಶಕುರ್‌ಪುರ ಗ್ರಾಮದ ನಿವಾಸಿ ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ವಾಯುವ್ಯ ದೆಹಲಿಯ ಸುಭಾಷ್ ಪ್ಲೇಸ್‌ನಲ್ಲಿ ಜಗಳ ನಡೆದಿರುವ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ಸಿಕ್ಕ ಬಳಿಕ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದರು. ಅಲ್ಲಿಗೆ ಬಂದ ನಂತರ, ಸುರೇಶ್ ಕುಮಾರ್ ಗಾಯಗೊಂಡಿರುವುದನ್ನ ಕಂಡು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆಯ ಸಮಯದಲ್ಲಿ ಸಂತ್ರಸ್ತ ತನ್ನ ಮಗ ಅಜಯ್ ಜೊತೆ ಹಣದ ವಿಚಾರದಲ್ಲಿ ಜಗಳವಾಡಿರುವುದು ಪತ್ತೆಯಾಗಿದೆ. ಜಗಳದ ವೇಳೆ ಡ್ರಗ್ಸ್ ಖರೀದಿಸಲು ಹಣ ನೀಡಲು ನಿರಾಕರಿಸಿದ್ದರಿಂದ  ಅಜಯ್ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular