ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮರದ ಮೇಲೆ ಮಹಿಳೆಯೊಬ್ಬರ ತಲೆ ಬುರುಡೆ ಪತ್ತೆಯಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಬೆಂಗಳೂರಿನ ಅಕ್ಷಯ ನಗರದ ಹುಳಿಮಾವು ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ತಲೆಬುರುಡೆಯೊಂದು ಪತ್ತೆಯಾಗಿದ್ದು, ಕಳೆದ 6 ತಿಂಗಳಿಂದ ಕೊಳೆತುಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ತನಿಖೆ ನಡೆಸಿರುವ ಹುಳಿಮಾವು ಪೊಲೀಸರು ಇದು ಮಹಿಳೆಯ ತಲೆ ಬುರುಡೆ ಎಂಬುದನ್ನು ಪತ್ತೆ ಮಾಡಿದ್ದಾರೆ.
7 ತಿಂಗಳ ಹಿಂದೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ನೇಪಾಳಿ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದು, ಅದೇ ಮಹಿಳೆಯ ತಲೆ ಬುರುಡೆ ಇದಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಪತ್ತೆಯಾಗಿರುವ ತಲೆ ಬುರುಡೆ, ಅಸ್ಥಿಪಂಜರದ ಡಿಎನ್ಎ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ.