
ಕೋಲಾರದ ಕುರುಡುಮಲೆ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯಕ್ಕೆ ಎದುರಾಗಿರುವ ಎಲ್ಲಾ ವಿಘ್ನಗಳು ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.
ರಮೇಶ್ ಜಾರಕಿಹೊಳಿ ದೆಹಲಿ ಟೂರ್ ವಿಚಾರವಾಗಿ ಮಾತನಾಡಿದ ಅವರು, ನನ್ನ ಮೇಲೆ ಯಾವ ಪ್ರಯೋಗ ಬೇಕಾದರೂ ಮಾಡಲಿ ಎಲ್ಲವನ್ನು ಎದುರಿಸುತ್ತೇನೆ. ಸಿಬಿಐ ದಾಳಿಯನ್ನೂ ಎದುರಿಸಲು ಸಿದ್ಧನಾಗಿದ್ದೇನೆ. ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಟಾಂಗ್ ನೀಡಿದ್ದಾರೆ.

