HomeKarnatakaBIG NEWS: ಮಂತ್ರಿ ಸ್ಥಾನ ನೀಡುವುದು ಬೇಡ ಎಂದು ಸಿಎಂ ಗೆ ತಿಳಿಸಿದ್ದೇನೆ ಎಂದ ಕೆ.ಎಸ್.ಈಶ್ವರಪ್ಪ

BIG NEWS: ಮಂತ್ರಿ ಸ್ಥಾನ ನೀಡುವುದು ಬೇಡ ಎಂದು ಸಿಎಂ ಗೆ ತಿಳಿಸಿದ್ದೇನೆ ಎಂದ ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜಕಾರಣದಲ್ಲಿ ಏನೇನು ಆಗುತ್ತದೆ ಎಂಬುದು ಯಾರಿಗೂ ಗೊತ್ತಾಗಲ್ಲ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ತಾನೆ ಅಂತ ಕನಸು ಬಿದ್ದಿತ್ತಾ? ಕ್ಲೀನ್ ಚಿಟ್ ಸಿಕ್ಕಿದ ಮೇಲೆ ಸಿಎಂ ಬೊಮ್ಮಾಯಿ ಅವರಿಗೆ ಕೇಳಿದ್ದೆ. ಹಾಗಾಗಿ ಸಿಎಂ ಸಚಿವನನ್ನಾಗಿ ಮಾಡುತ್ತೇನೆ ಎಂದಿದ್ದರು. ಅದೇನು ಸಮಸ್ಯೆಗಳಿವೆಯೋ ಗೊತ್ತಿಲ್ಲ ಎಂದರು.

ಸಂಪುಟ ವಿಸ್ತರಣೆ ಮಾಡಲು ಏನೇನು ಸಮಸ್ಯೆಗಳಿವೆಯೋ ಗೊತ್ತಿಲ್ಲ. ಪಕ್ಷ ಹಾಗೂ ಸರ್ಕಾರಕ್ಕೆ ಸಮಸ್ಯೆ ಮಾಡಲು ನಾನು ತಯಾರಿಲ್ಲ. ಮಂತ್ರಿ ಮಾಡುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular