HomeIndiaಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆತರುವಾಗಲೇ ಕಾರಿಗೆ ಬೆಂಕಿ: ದಂಪತಿ ಸಾವು

ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆತರುವಾಗಲೇ ಕಾರಿಗೆ ಬೆಂಕಿ: ದಂಪತಿ ಸಾವು

ಕಣ್ಣೂರು (ಕೇರಳ): ಕಣ್ಣೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಗರ್ಭಿಣಿ ಹಾಗೂ ಆಕೆಯ ಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಬಲಿಯಾದವರನ್ನು ಜಿಲ್ಲೆಯ ಕುಟ್ಟಿಯತ್ತೂರು ಮೂಲದ ಪ್ರಿಜಿತ್ (35) ಮತ್ತು ಅವರ ಪತ್ನಿ ರೀಶಾ (26) ಎಂದು ಗುರುತಿಸಲಾಗಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ರೀಷಾಳೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣ ಮಾಹಿತಿ ಪಡೆದ ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿ ಪ್ರಿಜಿತ್ ಮತ್ತು ರೀಶಾ ಅವರನ್ನು ಹೊರತೆಗೆದರು, ಆದರೆ ಅವರು ಅದಾಗಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದು, ವಾಹನಕ್ಕೆ ಬೆಂಕಿ ಹೊತ್ತಿಕೊಂಡಾಗ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಗು ಸೇರಿದಂತೆ ನಾಲ್ವರು ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತರ ಸಹ ಪ್ರಯಾಣಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಕಣ್ಣೂರು ನಗರ ಪೊಲೀಸ್ ಕಮಿಷನರ್ ಅಜಿತ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, “ಅವರಿಗೆ ಯಾವುದೇ ಗಾಯಗಳಾಗಿಲ್ಲ, ಅವರು ಆಸ್ಪತ್ರೆಯಲ್ಲಿದ್ದಾರೆ ಮತ್ತು ಅವರನ್ನು ಪರಿಶೀಲಿಸಲಾಗುತ್ತಿದೆ” ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular