ಅದಾನಿ ಸಮೂಹದ ಕುರಿತು ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ. ಇದರ ಪರಿಣಾಮ ಗೌತಮ್ ಅದಾನಿ ಸಂಪತ್ತಿನಲ್ಲಿ ಭಾರಿ ಇಳಿಕೆಯಾಗುವ ಮೂಲಕ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನದಿಂದ 15ನೇ ಸ್ಥಾನ ತಲುಪಿದ್ದಾರೆ.
ಇದರ ಮಧ್ಯೆ ಅದಾನಿ ಸಮೂಹದ ಸಂಸ್ಥೆಗಳ ಷೇರುಗಳನ್ನು ಭಾರತೀಯ ಜೀವ ವಿಮಾ ನಿಗಮ ಖರೀದಿಸಿತ್ತಲ್ಲದೆ, ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಅದಾನಿ ಸಮೂಹಕ್ಕೆ ಸಾಲವನ್ನು ನೀಡಿತ್ತು. ಹೀಗಾಗಿ ತಮ್ಮ ಹಣದ ಗತಿ ಏನು ಎಂದು ಎಲ್ಐಸಿ ಹೂಡಿಕೆದಾರರು ಆತಂಕಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದು, ಅದಾನಿ ಸಮೂಹದ ಷೇರುಗಳನ್ನು ಎಲ್ಐಸಿ ನಿಗದಿತ ಪರಿಮಿತಿಯೊಳಗೆ ಖರೀದಿಸಿದೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಾಲ ನೀಡಿಕೆಯೂ ಸಹ ಪರಿಮಿತಿಯೊಳಗೇ ಇದೆ ಎಂದು ತಿಳಿಸಿದ್ದಾರೆ.
ಇದರಿಂದಾಗಿ ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿರುವ ಎಲ್ಐಸಿ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲಾಭದಲ್ಲಿಯೇ ಇದ್ದು, ಸಾರ್ವಜನಿಕರ ಹಣಕ್ಕೆ ಯಾವುದೇ ಧಕ್ಕೆಯಾಗಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.