ಬೆಂಗಳೂರು: ದೇಶದ ಅತ್ಯುನ್ನತ ಪ್ರಶಸ್ತಿ, ಪದ್ಮಭೂಷಣ ಪುರಸ್ಕೃತೆ, ಹಿರಿಯ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.
ತಮಿಳುನಾಡಿನ ಚೆನ್ನೈನ ನಿವಾಸದಲ್ಲಿ ವಾಣಿ ಜಯರಾಂ ಅವರ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. 10,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ಗಾಯಕಿ ವಾಣಿ ಜಯರಾಂ ಕನ್ನಡ, ತೆಲುಗು,ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದರು. ಏಕಾಏಕಿ ಶವವಾಗಿ ಪತ್ತೆಯಾಗಿದ್ದಾರೆ.
ಗಣರಾಜ್ಯೋತ್ಸವದ ದಿನದಂದು ಭಾರತ ಸರ್ಕಾರ ವಾಣಿ ಜಯರಾಂ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.