HomeKarnatakaBIG NEWS: ಏಪ್ರಿಲ್ 10 ರಿಂದ 12 ರೊಳಗೆ ವಿಧಾನಸಭಾ ಚುನಾವಣೆ; ಮಾಜಿ ಸಿಎಂ ಯಡಿಯೂರಪ್ಪ...

BIG NEWS: ಏಪ್ರಿಲ್ 10 ರಿಂದ 12 ರೊಳಗೆ ವಿಧಾನಸಭಾ ಚುನಾವಣೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವನೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಕ್ಷೇತ್ರವಾರು ಲೆಕ್ಕಾಚಾರದಲ್ಲಿ ತೊಡಗಿದೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಏಪ್ರಿಲ್ 10ರಿಂದ 12ರೊಳಗೆ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಏಪ್ರಿಲ್ 10-12ರೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದರು.

ಸರ್ಕಾರದ ಸಾಧನೆಗಳನ್ನು ಆಧಾರಿಸಿ ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಹಣ ಬಲ, ಕೋಮು ರಾಜಕಾರಣ ಬಳಸಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನಗಳು ಮುಗಿದು ಹೋಗಿದೆ. ಬಿಜೆಪಿ ಸರ್ಕಾರದ ಯೋಜನೆಗಳನ್ನು ರಾಜ್ಯದ ಮೂಲೆ ಮೂಲೆಗೂ ಪ್ರತಿ ಮನೆಗೂ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡಲಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular