HomeKarnatakaBIG NEWS: ಮಹಿಳೆ ಜೊತೆ ಅಸಭ್ಯ ವರ್ತನೆ; ಆರೋಪಿ ಅರೆಸ್ಟ್

BIG NEWS: ಮಹಿಳೆ ಜೊತೆ ಅಸಭ್ಯ ವರ್ತನೆ; ಆರೋಪಿ ಅರೆಸ್ಟ್

ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ ತೋರಿದ್ದ ಆರೋಪಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಸತೀಶ್ ಬಂಧಿತ ಆರೋಪಿ. ಒರಾಯನ್ ಮಾಲ್ ಬಳಿ ಕರೆದಿದ್ದ ಆರೋಪಿ ಸತೀಶ್, ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ್ದ. ಅಲ್ಲದೇ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಸಂತ್ರಸ್ತ ಮಹಿಳೆ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಆರೋಪಿ ತನ್ನ ಬಳಿ ಇದ್ದ ಹಣ, ಚಿನ್ನಾಭರಣಗಳನ್ನು ದೋಚಿದ್ದು ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಮಹಿಳೆ ದೂರಿದ್ದಳು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗ ಆರೋಪಿ ಸತೀಶ್ ನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular