ದೇವನಹಳ್ಳಿ: ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೇಳುತ್ತಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಲ್ಲಿ ಭಿನ್ನಮತ ಮೂಡಿದೆ. ಹಾಲಿ ಶಾಸಕ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ಘೋಷಣೆಗೆ ಪಕ್ಷದ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮನೆ ಮುಂದೆ ಜಮಾವಣೆಗೊಂಡಿರುವ ಜೆಡಿಎಸ್ ಕಾರ್ಯಕರ್ತರು ನಾರಾಯಣಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದಾರೆ. ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ನೀಡಿದರೆ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಸೋಲಲಿದೆ ಎಂದು ಹೇಳಿದ್ದಾರೆ.
ದೇವನಹಳ್ಳಿಯಲ್ಲಿ ಹೊಸ ಅಭ್ಯರ್ಥಿಗೆ ಜೆಡಿಎಸ್ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.