HomeKarnatakaBIG NEWS: ಕರ್ನಾಟಕದಲ್ಲಿ ಬಿಜೆಪಿ ICUನಲ್ಲಿದೆ ಹಾಗಾಗಿ ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ; ಮಾಜಿ ಸಚಿವ...

BIG NEWS: ಕರ್ನಾಟಕದಲ್ಲಿ ಬಿಜೆಪಿ ICUನಲ್ಲಿದೆ ಹಾಗಾಗಿ ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ; ಮಾಜಿ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

ಕಲಬುರ್ಗಿ: ಬಿಜೆಪಿಯ 7-8 ಶಾಸಕರು ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಬಿಜೆಪಿಯ ಸುಳ್ಳು ಭರವಸೆಗಳು ರಾಜ್ಯದ ಜನತೆಗೆ ಅರ್ಥವಾಗಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಎಂ.ಬಿ. ಪಾಟೀಲ್, ಬಿ.ಎಸ್. ಯಡಿಯೂರಪ್ಪ ಅವರನ್ನೇ ಬಿಜೆಪಿ ಪಂಚರ್ ಮಾಡಿದೆ. ಬರುವ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನ ಗೆದ್ದರೆ ಅದೇ ದೊಡ್ಡದು. ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಮೋದಿ, ಅಮಿತ್ ಶಾ ಅವರನ್ನು ರಾಜ್ಯಕ್ಕೆ ಕರೆಸುತ್ತಿದ್ದಾರೆ. ಮೋದಿ ಕಾರ್ಯಕ್ರಮಕ್ಕಿಂತ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ನೂರು ಪಟ್ಟು ಹೆಚ್ಚು ಜನ ಬಂದಿದ್ದರು ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ವಿಚಾರವಾಗಿ, ಕಾಂಗ್ರೆಸ್ ನಲ್ಲಿ ಸಿಎಂ ಆಗುವ ಅರ್ಹತೆ ಹಲವರಿಗೆ ಇದೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಸಿಎಂ ಆಗುವವರು ಹಲವರಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಸಿಎಂ ಯಾರೆಂದು ನಿರ್ಧಾರ ಮಾಡುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular