ಅಪ್ರಾಪ್ತರಿಗೆ ವಾಹನ ನೀಡುವ ಪೋಷಕರು ಓದಲೇಬೇಕು ಈ ಸುದ್ದಿ….!

ದ್ವಿಚಕ್ರ ವಾಹನ ಸವಾರಿ ಮಾಡಿ ಸಿಕ್ಕಿಬಿದ್ದ 20 ಅಪ್ರಾಪ್ತರ ಪೋಷಕರ ವಿರುದ್ಧ ಉತ್ತರಪ್ರದೇಶದ ಗಾಜಿಯಾಬಾದ್ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಗಾಜಿಯಾಬಾದ್‌ನಲ್ಲಿ ಕಳೆದ ಎರಡು ದಿನಗಳಲ್ಲಿ ದ್ವಿಚಕ್ರ ವಾಹನ ಸವಾರಿ ಮಾಡಿ ಸಿಕ್ಕಿಬಿದ್ದ 22 ಅಪ್ರಾಪ್ತರ ಪೋಷಕರ ವಿರುದ್ಧ ಮೋಟಾರು ವಾಹನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಚಿಕ್ಕವಯಸ್ಸಿನವರ ದ್ವಿಚಕ್ರ ವಾಹನ ಸವಾರಿಯಿಂದ ಸಂಭವಿಸುತ್ತಿರುವ ಅಪಘಾತಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸದಂತೆ ಅಧಿಕಾರಿಗಳು ಪೋಷಕರನ್ನು ಒತ್ತಾಯಿಸಿದರು.

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಶುಕ್ರವಾರ 11 ನೇ ತರಗತಿಯ ವಿದ್ಯಾರ್ಥಿ ಆಶಿಶ್ ಚೌಧರಿ (17) ಶಾಲೆಯಿಂದ ಮನೆಗೆ ಹಿಂದಿರುಗುವಾಗ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಒಂದು ದಿನದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಸ್ಕೂಟರ್‌ನಲ್ಲಿ ಹಿಂದೆ ಕೂತಿದ್ದ ಆತನ ಸ್ನೇಹಿತ ಇಗ್ಜೋತ್ ಸಿಂಗ್ ಅವರ ಕಾಲಿಗೆ ಮೂಳೆ ಮುರಿದಿದೆ. ಪೊಲೀಸರ ಪ್ರಕಾರ, ಇಬ್ಬರೂ ರಸ್ತೆಯ ರಾಂಗ್ ಸೈಡ್‌ನಲ್ಲಿ ಚಾಲನೆ ಮಾಡುತ್ತಾ ಮತ್ತು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read