HomeKarnatakaBIG NEWS: ರಾಜಕಾರಣಕ್ಕಾಗಿ ಬಿಜೆಪಿಯವರು ಯಾವ ಹಂತಕ್ಕೆ ಬೇಕಾದ್ರೂ ಹೋಗ್ತಾರೆ; ಪಾಕಿಸ್ತಾನ ಹೆಸರಿಟ್ಟುಕೊಂಡು ರಾಜಕೀಯ ಮಾಡ್ತಿದ್ದಾರೆ;...

BIG NEWS: ರಾಜಕಾರಣಕ್ಕಾಗಿ ಬಿಜೆಪಿಯವರು ಯಾವ ಹಂತಕ್ಕೆ ಬೇಕಾದ್ರೂ ಹೋಗ್ತಾರೆ; ಪಾಕಿಸ್ತಾನ ಹೆಸರಿಟ್ಟುಕೊಂಡು ರಾಜಕೀಯ ಮಾಡ್ತಿದ್ದಾರೆ; ಡಿ.ಕೆ. ಸುರೇಶ್ ವಾಗ್ದಾಳಿ

ಬೆಂಗಳೂರು: ಪಾಕಿಸ್ತಾನದ ಹೆಸರಿಟ್ಟುಕೊಂಡು ರಾಜಕಾರಣ ಮಾಡುವುದು ಬಿಜೆಪಿ ಪದ್ಧತಿ. ರಾಜಕಾರಣಕ್ಕಾಗಿ ಬಿಜೆಪಿಯವರು ಕೊಲೆಗಳನ್ನು ಸಹ ಮಾಡಿಸುತ್ತಾರೆ ಎಂದು ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ಬಿಜೆಪಿಯವರು ನೀಚರು, ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಬೆಂಗಳೂರು, ಕರಾವಳಿ ಭಾಗದಲ್ಲಿ ಕೋಮು ಗಲಭೆ ಮಾಡಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಪದೇ ಪದೇ ಪಾಕಿಸ್ತಾನ ವಿಚಾರ ಪ್ರಸ್ತಾಪಿಸುತ್ತಿದ್ದಾರೆ. ಪದೇ ಪದೇ ಪಾಕಿಸ್ತಾನ ವಿಚಾರ ಪ್ರಸ್ತಾಪ ಮಾಡುವ ಸಿ.ಟಿ. ರವಿ ವಿರುದ್ಧ ಮೊದಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಅಭಿವೃದ್ಧಿ ಬಗ್ಗೆ ಬಿಜೆಪಿ ನಾಯಕರಿಗೆ ಯಾವುದೇ ಗಮನವಿಲ್ಲ, ಅವರ ನಂಟು ಇರುವುದೆಲ್ಲ ಪಾಕಿಸ್ತಾನ ವಿಚಾರಕ್ಕೆ ಮಾತ್ರ ಎಂದು ಹಿಗ್ಗಾಮುಗ್ಗಾ ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular