ರಾಜ್ಯಕ್ಕಿಂದು ಪ್ರಧಾನಿ ನರೇಂದ್ರ ಮೋದಿ; ವಿವಿಧ ಯೋಜನೆಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11:30ಕ್ಕೆ ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ಸಪ್ತಾಹದಲ್ಲಿ ಪಾಲ್ಗೊಳ್ಳುವ ಅವರು ಮಧ್ಯಾಹ್ನ 3:30ಕ್ಕೆ ತುಮಕೂರಿನ ಗುಬ್ಬಿ ತಾಲೂಕಿನಲ್ಲಿರುವ ಹೆಚ್ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕದ ಉದ್ಘಾಟನೆ ನೆರವೇರಿಸಲಿದ್ದಾರೆ.

ಬಳಿಕ ಜಲಜೀವನ್ ಮಿಷನ್ ಯೋಜನೆ ಅಡಿ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರು ತಾಲೂಕಿನ ವಿವಿಧ ಗ್ರಾಮಗಳಿಗೆ ನೀರು ಪೂರೈಸುವ ಯೋಜನೆಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದು, ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು ಮಧ್ಯಾಹ್ನ 1:00 ಗಂಟೆಯಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸಾರ್ವಜನಿಕರನ್ನು ಬಿಡಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟದ ಹಲವು ಸಹೋದ್ಯೋಗಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read