alex Certify SSLC ಪಾಸಾದವರಿಗೆ ಶುಭ ಸುದ್ದಿ: ಅಂಚೆ ಇಲಾಖೆಯಲ್ಲಿ ರಾಜ್ಯದ 3036 ಹುದ್ದೆಗಳು ಸೇರಿ 40889 ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪಾಸಾದವರಿಗೆ ಶುಭ ಸುದ್ದಿ: ಅಂಚೆ ಇಲಾಖೆಯಲ್ಲಿ ರಾಜ್ಯದ 3036 ಹುದ್ದೆಗಳು ಸೇರಿ 40889 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಫೆ. 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು www.Indiapostgdsonline.gov.in ವೆಬ್‍ಸೈಟ್ ಮೂಲಕವೇ ಅರ್ಜಿ ಸಲ್ಲಿಸಬೇಕು. ವಯೋಮಿತಿ 18 ರಿಂದ 40 ವರ್ಷಗಳು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯವಾಗಿರಬೇಕು. ಗಣಿತ ಮತ್ತು ಇಂಗ್ಲಿಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು 10 ನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಅಂಕಗಳ ಆಧಾರದ ಮೇಲೆ ಆನ್‍ಲೈನ್ ಮೂಲಕವೇ ನೇಮಕಾತಿ ನಡೆಯುತ್ತದೆ.

ಇದೇ ಮೊದಲ ಬಾರಿಗೆ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಅಖಿಲ ಭಾರತ ಮಟ್ಟದಲ್ಲಿ ಏಕ ಕಾಲಕ್ಕೆ ನಡೆಯುತ್ತಿದ್ದು, ದೇಶಾದ್ಯಂತ ಒಟ್ಟು 40,889 ಹುದ್ದೆಗಳು ಖಾಲಿ ಇವೆ. ರಾಜ್ಯದಲ್ಲಿ 3,036 ಹುದ್ದೆಗಳು ಖಾಲಿ ಇದ್ದು, ಶಿವಮೊಗ್ಗ ಅಂಚೆ ವಿಭಾಗದಲ್ಲಿ 149 ಹುದ್ದೆಗಳು ಖಾಲಿ ಇದೆ. ಹೆಚ್ಚಿನ ಮಾಹಿತಿಗಾಗಿ ಆಯಾ ವಿಭಾಗದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು. ಶಿವಮೊಗ್ಗ ಅಂಚೆ ವಿಭಾಗದ ಸಂಪರ್ಕ ಸಂಖ್ಯೆ 08182-222516 ಆಗಿರುತ್ತದೆ ಎಂದು ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...