HomeKarnatakaಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ರಚನೆ: ಮುನಿಸಿಕೊಂಡಿದ್ದ ಪರಮೇಶ್ವರ್ ಪ್ರಮುಖ ಪಾತ್ರ

ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ರಚನೆ: ಮುನಿಸಿಕೊಂಡಿದ್ದ ಪರಮೇಶ್ವರ್ ಪ್ರಮುಖ ಪಾತ್ರ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಲಾಗಿದೆ. ಮೋಹನ ಪ್ರಕಾಶ್ ನೇತೃತ್ವದಲ್ಲಿ ಎಐಸಿಸಿ ವತಿಯಿಂದ ಸ್ಕ್ರೀನಿಂಗ್ ಕಮಿಟಿ ರಚಿಸಲಾಗಿದೆ.

ಸ್ಕ್ರೀನಿಂಗ್ ಕಮಿಟಿ ಅಧಿಕೃತ ಸದಸ್ಯರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಎಂ.ಬಿ. ಪಾಟೀಲ್ ಹಾಗೂ ಡಾ.ಜಿ. ಪರಮೇಶ್ವರ್ ಅವರಿಗೆ ಸ್ಥಾನ ನೀಡಲಾಗಿದೆ. ಇವರೊಂದಿಗೆ ಮೂವರು ಸದಸ್ಯರನ್ನು ನೇಮಕ ಮಾಡಿದ್ದು, ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ, ಐವರು ಎಐಸಿಸಿ ಕಾರ್ಯದರ್ಶಿಗಳಿಗೂ ಸ್ಥಾನ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಮಾಜಿ ಡಿಸಿಎಂ ಪರಮೇಶ್ವರ್ ಮುನಿಸಿಕೊಂಡಿದ್ದರು. ಪ್ರಣಾಳಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದರು. ಜವಾಬ್ದಾರಿ ನೀಡಿ ಪರಮೇಶ್ವರ್ ಅವರನ್ನು ವರಿಷ್ಠರು ಸಮಾಧಾನಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಪರಮೇಶ್ವರ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular