HomeKarnatakaBIG NEWS: ಪ್ರಧಾನಿಯವರೆ, ನಿಮ್ಮ ಮುಖವಾಡ ಕಳಚಿ ಬಹಳ ದಿನಗಳಾಗಿವೆ; ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

BIG NEWS: ಪ್ರಧಾನಿಯವರೆ, ನಿಮ್ಮ ಮುಖವಾಡ ಕಳಚಿ ಬಹಳ ದಿನಗಳಾಗಿವೆ; ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕರ್ನಾಟಕವು ಸೇರಿದಂತೆ ಎಲ್ಲ ರಾಜ್ಯಗಳ‌ ಪ್ರಾದೇಶಿಕತೆಯ ಕತ್ತು‌ಹಿಸುಕುವ ಕುತಂತ್ರದ ರಾಜಕೀಯ ಮುಂದುವರಿದಿದೆ. ರಾಜ್ಯಗಳ ಅಧಿಕಾರವನ್ನೆಲ್ಲ ಮೊಟಕುಗೊಳಿಸಿದ್ದಾಯ್ತು. ಈಗ, ಚುನಾವಣೆ ಹತ್ತಿರ ಬಂದಿದೆ ಎಂಬ ಕಾರಣಕ್ಕೆ ಕೆಲವು ಯೋಜನೆಗಳ‌ ಉದ್ಘಾಟನೆಗೆ ಆಗಮಿಸಿದ ಪ್ರಧಾನಿಯವರೆ, ನಿಮ್ಮ ಮುಖವಾಡ ಕಳಚಿ ಬಹಳ ದಿನಗಳಾಗಿವೆ ಎಂದು ಜಾತ್ಯಾತೀತ ಜನತಾದಳ ವಾಗ್ದಾಳಿ ನಡೆಸಿದೆ.

ಇನ್ನೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಮತ್ತು 25 ಸಂಸದರು‌ ತಮ್ಮ ಬೆನ್ನೆಲುಬನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ರಾಜ್ಯದ ಜನತೆ ಅವರಿಗೆ ಮುಖ್ಯವೇ ಅಲ್ಲ. ಏನಿದ್ದರೂ ಮೋದಿಯವರ ಭಜನೆ ಮತ್ತು ಮುಖಸ್ತುತಿ ರಾಜಕಾರಣವಷ್ಟೆ! ಎಂದು ಕಿಡಿಕಾರಿದೆ.

ಮೋದಿಯವರು ಬಂದ ದಿನ ರೆಕ್ಕೆ ಬಲಿತ ಹಕ್ಕಿಯಂತೆ ಆಡುವುದು ಮಾತ್ರ ಇಲ್ಲಿನ ಬಿಜೆಪಿ ಸರ್ಕಾರಕ್ಕೆ ಗೊತ್ತಿರುವುದು! ಇಂತಹ ಬೃಹತ್ ನಾಟಕ ಮಂಡಳಿಯ ಯಾವ ಪ್ರದರ್ಶನವೂ ಇನ್ನು ಕರ್ನಾಟಕದಲ್ಲಿ ನಡೆಯುವುದಿಲ್ಲ. ನಿಮ್ಮಂತಹ ಮುಖೇಡಿ ರಾಜಕಾರಣಿಗಳು ಹಾಗೂ ನಿಮ್ಮನ್ನು ತೊಗಲು ಗೊಂಬೆಗಳನ್ನಾಗಿ ಮಾಡಿರುವ ದೆಹಲಿ ದೊರೆಗಳನ್ನು ರಾಜ್ಯ ತಿರಸ್ಕರಿಸಲಿದೆ ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ ನಪುಂಸಕವಾಗಿರುವುದು ದಿಟ. ಬರಡು ಭೂಮಿಯಂತೆ ಯಾವ ಪ್ರಯೋಜನವು ಇಲ್ಲದ ರಾಜ್ಯ ಸರ್ಕಾರವಿದು. ಸಾರ್ವಜನಿಕರ ಹಣ ಬಾಚುವ, ದೋಚುವುದಷ್ಟೆ ಇವರ ಕಾಯಕ. ಒಟ್ಟಿನಲ್ಲಿ, ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರವನ್ನು ಜನರು ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.

For Latest News Updates, Join Our Whatsapp Community🚩
RELATED ARTICLES

Most Popular