HomeCrimeಹುಡುಗಿ ಭೇಟಿ ಮಾಡಲು ಬಂದ ಯುವಕನನ್ನು ಮರಕ್ಕೆ ಕಟ್ಟಿ ಥಳಿತ; ಮೂತ್ರಪಾನ ಮಾಡಿಸಿದ ಗ್ರಾಮಸ್ಥರು

ಹುಡುಗಿ ಭೇಟಿ ಮಾಡಲು ಬಂದ ಯುವಕನನ್ನು ಮರಕ್ಕೆ ಕಟ್ಟಿ ಥಳಿತ; ಮೂತ್ರಪಾನ ಮಾಡಿಸಿದ ಗ್ರಾಮಸ್ಥರು

ಹುಡುಗಿಯನ್ನು ಭೇಟಿ ಮಾಡಲು ಬಂದಿದ್ದ ಯುವಕನನ್ನ ಕಟ್ಟಿ ಹಾಕಿ ಆತನ ಬಾಯಿಗೆ ಗ್ರಾಮಸ್ಥರು ಮೂತ್ರ ಸುರಿದು ಥಳಿಸಿದ್ದಾರೆ.

ರಾಜಸ್ಥಾನದ ಜಲೋರ್ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಹುಡುಗಿಯನ್ನು ಭೇಟಿ ಮಾಡಲು ಬಂದ ವ್ಯಕ್ತಿಯನ್ನು ಗ್ರಾಮಸ್ಥರು ಸೆರೆಹಿಡಿದು ವ್ಯಕ್ತಿಯನ್ನು ಮರಕ್ಕೆ ಕಟ್ಟಿ, ಥಳಿಸಿ, ಮೂತ್ರವನ್ನು ಬಾಯಿಗೆ ಸುರಿದಿದ್ದಾರೆ.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲ್ಲೆಗೊಳಗಾದ ವ್ಯಕ್ತಿ ಭಾನುವಾರ ರಾತ್ರಿ ಸಮೀಪದ ಹಳ್ಳಿಯೊಂದರಲ್ಲಿ ಬಾಲಕಿಯನ್ನು ಭೇಟಿಯಾಗಲು ಬಂದಿದ್ದ. ನಂತರ ಗ್ರಾಮಸ್ಥರು ಮತ್ತು ಬಾಲಕಿಯ ಕುಟುಂಬಸ್ಥರು ಆತನನ್ನು ಹಿಡಿದು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ್ದಾರೆ.

ವಿಷಯ ತಿಳಿದ ನಂತರ ವ್ಯಕ್ತಿಯ ಕುಟುಂಬ ಸದಸ್ಯರು ಘಟನಾ ಸ್ಥಳಕ್ಕೆ ಆಗಮಿಸಿ ಆತನನ್ನು ರಕ್ಷಿಸಿದ್ದಾರೆ. ಆದರೆ ಗ್ರಾಮಸ್ಥರು ಎಚ್ಚರಿಕೆ ನೀಡಿ ಆತನನ್ನು ಬಿಡುವ ಮುನ್ನ ಮೂತ್ರವನ್ನು ಬಾಯಿಗೆ ಸುರಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಸೋಮವಾರ ಅಂತರ್ಜಾಲದಲ್ಲಿ ವೈರಲ್ ಆಗಿದೆ.

For Latest News Updates, Join Our Whatsapp Community🚩
RELATED ARTICLES

Most Popular