ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಏಮ್ಸ್ ಮತ್ತು ಎನ್.ಎಂ.ಸಿ. ಸದಸ್ಯತ್ವ ಕೊಡಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಲಂಚ ಪಡೆದುಕೊಂಡಿದೆ ಎಂದು ಜೆಡಿಎಸ್ ಮುಖಂಡ ಭೋಜೇಗೌಡ ಆರೋಪಿಸಿದ್ದಾರೆ.
ಇದಕ್ಕೆ ಅತಿಕ್ರಿಯ ನೀಡಿರುವ ಪ್ರಹ್ಲಾದ್ ಜೋಶಿ, ತಳ ಬುಡವಿಲ್ಲದ ಮತ್ತು ಜನರನ್ನು ದಾರಿ ತಪ್ಪಿಸುವ ಆಪಾದನೆ ಇದಾಗಿದೆ. ಆ ಪತ್ರವನ್ನು ವೈದ್ಯರೊಬ್ಬರಿಗೆ ಬರೆಯಲಾಗಿದೆ. ಅದು ನಾನು ಬರೆದ ಪತ್ರವಲ್ಲ, ಭೋಜೇಗೌಡರು ಹೇಳಿರುವ ಹೆಸರಿನ ಉದ್ಯೋಗಿ ನಮ್ಮ ಕಚೇರಿಯಲ್ಲಿ ಇಲ್ಲ. ಈ ರೀತಿ ಆಧಾರ ರಹಿತ ಆಪಾದನೆಯನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ನನ್ನ ತೇಜೋವಧೆ ಮಾಡುವ ಹುನ್ನಾರ ಇದಾಗಿದ್ದು, ಮಾನನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಚಿಂತನೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.