HomeKarnatakaBIG NEWS: ಬಿಜೆಪಿ V/S ಕಾಂಗ್ರೆಸ್; ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಹೋದರರ ಸವಾಲ್; ಹೊಸ...

BIG NEWS: ಬಿಜೆಪಿ V/S ಕಾಂಗ್ರೆಸ್; ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಹೋದರರ ಸವಾಲ್; ಹೊಸ ಅಸ್ತ್ರ ಪ್ರಯೋಗಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿಯಿದ್ದು, ರಾಜ್ಯದ ಪ್ರತಿಯೊಂದು ಕ್ಷೇತ್ರವು ರಣಕಣವಾಗಿ ಮಾರ್ಪಡುತ್ತಿದೆ. ಅದರಲ್ಲಿಯೂ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಹಾಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಹಿರಂಗ ಸಮರ ಸಾರಿದ್ದಾರೆ. ಈ ಬಾರಿ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸುವುದಾಗಿ ಪಣತೊಟ್ಟಿದ್ದಾರೆ. ಕೈ ಶಾಸಕಿ ಪ್ರತಿತಂತ್ರ ಹೆಣೆದಿದ್ದು, ಸಹೋದರರ ನಡುವೆ ಸವಾಲು ಹಾಕಿದ್ದಾರೆ.

ರಮೇಶ್ ಜಾರಕಿಹೊಳಿಗೆ ಠಕ್ಕರ್ ಕೊಡಲು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಅಸ್ತ್ರ ಪ್ರಯೋಗಿಸಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ರಮೇಶ್ ಜಾರಕಿಹೊಳಿ ಸಹೋದರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಕರೆತಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪರ ಪ್ರಚಾರಕ್ಕೆ ಇಳಿದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆ ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular