HomeKarnatakaಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ವಿಚಾರಣೆ ಮುಂದೂಡಿಕೆ

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ, ಮೀಸಲು ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗಕ್ಕೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 14ಕ್ಕೆ ಮುಂದೂಡಿದೆ.

ಚುನಾವಣಾ ಆಯೋಗದ ವತಿಯಿಂದ ಸಲ್ಲಿಸಲಾದ ಅರ್ಜಿ ವಿಚಾರಣೆ ಹಿರಿಯ ನ್ಯಾ. ಅಲೋಕ್ ಅರಾಧೆ, ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ವಿಭಾಗಿಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿತ್ತು. ಸರ್ಕಾರಿ ವಕೀಲರು, ರಾಜ್ಯದ ಪರ ಅಡ್ವೋಕೇಟ್ ಜನರಲ್ ವಾದ ಮಂಡಿಸಬೇಕಿದ್ದು, ಕಾಲಾವಕಾಶ ನೀಡಬೇಕೆಂದು ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಪೀಠ ಇದನ್ನು ಪರಿಗಣಿಸಿದ್ದು ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಿದೆ. ಸಬೂಬು ಹೇಳಿಕೊಂಡು ಕಾಲದೂಡುತ್ತ ವಿಳಂಬ ಮಾಡುತ್ತಿರುವ ಸರ್ಕಾರಕ್ಕೆ ಚಾಟಿ ಬೀಸಿದ್ದ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿತ್ತು. ಕ್ಷೇತ್ರಗಳ ಪುನರ್ ವಿಂಗಡಣೆ, ಮೀಸಲು ನಿಗದಿ ಮಾಡುವ ಪ್ರಕ್ರಿಯೆಯನ್ನು 2023ರ ಫೆಬ್ರವರಿ 1 ರೊಳಗೆ ಪೂರ್ಣಗೊಳಿಸಲು ಹೈಕೋರ್ಟ್ ಗಡುವು ನೀಡಿ 2022ರ ಡಿಸೆಂಬರ್ 14ರಂದು ಆದೇಶ ಹೊರಡಿಸಿತ್ತು. ಅಲ್ಲದೆ ವಿಚಾರಣೆಯನ್ನು 2023ರ ಫೆಬ್ರವರಿ 2 ಕ್ಕೆ ಮುಂದೂಡಲಾಗಿತ್ತು. ನಂತರದಲ್ಲಿ ಅರ್ಜಿ ವಿಚಾರಣೆ ಎರಡು ಸಲ ಮುಂದೂಡಿಕೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular