HomeKarnatakaBIG NEWS: ಶಿವಮೊಗ್ಗ ಏರ್ ಪೋರ್ಟ್ ಗೆ ಯಡಿಯೂರಪ್ಪ ಹೆಸರಿಡುವ ವಿಚಾರ; ಡಿ.ಕೆ. ಶಿವಕುಮಾರ್ ಹೇಳಿದ್ದೇನು.....?

BIG NEWS: ಶಿವಮೊಗ್ಗ ಏರ್ ಪೋರ್ಟ್ ಗೆ ಯಡಿಯೂರಪ್ಪ ಹೆಸರಿಡುವ ವಿಚಾರ; ಡಿ.ಕೆ. ಶಿವಕುಮಾರ್ ಹೇಳಿದ್ದೇನು…..?

ಶಿವಮೊಗ್ಗ: ಸಿಬಿಐನವರು ನನ್ನ ಮಗಳಿಗೆ ನೋಟೀಸ್ ನೀಡಿದ್ದಾರೆ. ಶಾಲೆ, ಕಾಲೇಜು ಫೀಜ್ ವಿಚಾರವನ್ನು ಕೇಳಿದ್ದಾರೆ. ಈ ಬಗ್ಗೆ ನಾನು ಸಿಬಿಐಗೆ ಪತ್ರ ಬರೆಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಏರ್ ಪೋರ್ಟ್ ಗೆ ಯಾರ ಹೆಸರು ಬೇಕಾದರೂ ಇಡಲಿ. ಭೂಮಿ ಕಳೆದುಕೊಂಡವರಿಗೆ ಮೊದಲು ಪರಿಹಾರ ನೀಡಲಿ ಎಂದು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿಬಿಐಗೆ ವಹಿಸಲು ಮನವಿ ಮಾಡಿರುವ ವಿಚಾರವಾಗಿ ರಮೇಶ್ ಜಾರಕಿಹೊಳಿ ಬಗ್ಗೆ ನಾನು ಮಾತನಾಡಲ್ಲ, ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಮಂತ್ರಿ ಸ್ಥಾನ ಸಿಗದೇ ಹತಾಶರಾಗಿದ್ದಾರೆ. ಹಾಗಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular