HomeKarnatakaತಲೆಮರೆಸಿಕೊಂಡ ಖ್ಯಾತ ನಟಿ ಕುಟುಂಬ ಪತ್ತೆಗೆ ಲುಕ್ ಔಟ್ ನೋಟಿಸ್

ತಲೆಮರೆಸಿಕೊಂಡ ಖ್ಯಾತ ನಟಿ ಕುಟುಂಬ ಪತ್ತೆಗೆ ಲುಕ್ ಔಟ್ ನೋಟಿಸ್

 ಬೆಂಗಳೂರು: ನಟಿ ಅಭಿನಯ ಕುಟುಂಬಕ್ಕೆ ಜೈಲು ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ನಟಿ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ತಲೆ ಮರೆಸಿಕೊಂಡಿರುವ ನಟಿ ಅಭಿನಯ, ಅವರ ತಾಯಿ ಮತ್ತು ಸಹೋದರ ವರದಕ್ಷಿಣೆ ಕಿರುಕುಳ ಹಿನ್ನೆಲೆ ಅಭಿನಯಾ ಅವರ ಅತ್ತಿಗೆ ವರಲಕ್ಷ್ಮಿ ಕೋರ್ಟ್ ಮೆಟ್ಟಿಲೇರಿದ್ದರು. ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಪೊಲೀಸರು ಅಪರಾಧಿಗಳನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಬೇಕಿದ್ದು, ಆದರೆ ಪೊಲೀಸರಿಗೆ ಸಿಗದೇ ನಟಿ ಅಭಿನಯ, ಅವರ ತಾಯಿ, ಸಹೋದರ ತಲೆಮರೆಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭಿನಯ, ತಾಯಿ ಜಯಮ್ಮ, ಸಹೋದರ ಚೆಲುವರಾಜು ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮೂವರು ಅಪರಾಧಿಗಳ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಅಪರಾಧಿಗಳ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಚಂದ್ರಾ ಲೇಔಟ್ ಠಾಣೆ ಪೊಲೀಸರು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular