HomeIndiaಹಿರಿಯ ಮಹಿಳೆಯರಿಗೆ ಉತ್ತರ ಪ್ರದೇಶ ಸರ್ಕಾರದಿಂದ 'ಬಂಪರ್ ಗಿಫ್ಟ್'

ಹಿರಿಯ ಮಹಿಳೆಯರಿಗೆ ಉತ್ತರ ಪ್ರದೇಶ ಸರ್ಕಾರದಿಂದ ‘ಬಂಪರ್ ಗಿಫ್ಟ್’

ಹಿರಿಯ ಮಹಿಳೆಯರಿಗೆ ಉತ್ತರ ಪ್ರದೇಶ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. 60 ವರ್ಷ ದಾಟಿದವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ತೀರ್ಮಾನಿಸಲಾಗಿದೆ.

2022ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಈ ಭರವಸೆಯನ್ನು ನೀಡಿತ್ತು. ಇದೀಗ ಇದನ್ನು ನೆರವೇರಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸಿದ್ಧವಾಗಿದೆ.

ಈ ಯೋಜನೆ ಅನುಷ್ಠಾನಗೊಂಡ ಬಳಿಕ ಸಾರಿಗೆ ಸಂಸ್ಥೆಗೆ 260 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಹೇಳಲಾಗಿದ್ದು, ಬಜೆಟ್ ನಲ್ಲಿ ಮೀಸಲಿರಿಸುವ ಸಾಧ್ಯತೆ ಇದೆ. ಉತ್ತರ ಪ್ರದೇಶದ ಸರ್ಕಾರಿ ಬಸ್ ಗಳಲ್ಲಿ ಪ್ರತಿನಿತ್ಯ 3.73 ಲಕ್ಷ ಮಹಿಳೆಯರು ಸಂಚರಿಸುತ್ತಿದ್ದು, ಈ ಪೈಕಿ 88,438 ಮಂದಿ 60 ವರ್ಷ ಮೇಲ್ಪಟ್ಟವರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular