HomeKarnatakaBIG NEWS: ರಾಜ್ಯಪಾಲರಿಗೆ ರೆಡ್ ಕಾರ್ಪೆಟ್ ಸ್ವಾಗತ; ಬಜೆಟ್ ಅಧಿವೇಶನ ಆರಂಭ

BIG NEWS: ರಾಜ್ಯಪಾಲರಿಗೆ ರೆಡ್ ಕಾರ್ಪೆಟ್ ಸ್ವಾಗತ; ಬಜೆಟ್ ಅಧಿವೇಶನ ಆರಂಭ

ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವಿಧಾನಸೌಧದಲ್ಲಿ ರೆಡ್ ಕಾರ್ಪೆಟ್ ಸ್ವಾಗತ ನೀಡಲಾಗಿದೆ.

ಸರ್ಕಾರದ ಕೊನೆ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯಪಾಲರ ಸ್ವಾಗತಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಗಳ ಮೇಲೆ ರೆಡ್ ಕಾರ್ಪೆಟ್ ಹಾಕಲಾಗಿತ್ತು. ಅಧಿವೇಶನಕ್ಕೆ ರಾಜ್ಯಪಾಲರು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೂಲಕ ಪ್ರವೇಶಿಸಿದ್ದಾರೆ. ಅಶ್ವಾರೂಢ ಬೆಂಗಾವಲು ಪಡೆ, ವಾದ್ಯವೃಂದದ ಮೂಲಕ ರಾಜ್ಯಪಾಲರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.

ಸಿಎಂ ಬಸವರಾಜ್ ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಮಾಧುಸ್ವಾಮಿ ಮೊದಲಾದವರು ರಾಜ್ಯಪಾಲರನ್ನು ವಿಶೇಷವಾಗಿ ಸ್ವಾಗತಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular