HomeKarnatakaBIG NEWS: ಜೆಡಿಎಸ್ ನಾಯಕರ ವಿರುದ್ಧ ಮತ್ತೆ ಗರಂ ಆದ ಶಾಸಕ ಶಿವಲಿಂಗೇಗೌಡ

BIG NEWS: ಜೆಡಿಎಸ್ ನಾಯಕರ ವಿರುದ್ಧ ಮತ್ತೆ ಗರಂ ಆದ ಶಾಸಕ ಶಿವಲಿಂಗೇಗೌಡ

ಬೆಂಗಳೂರು: ಮಾತಿಗೆ ಮಾತ್ರ ನೀವು ಜೆಡಿಎಸ್ ನಲ್ಲಿಯೇ ಇರಿ ಎಂದು ಹೇಳುತ್ತಾರೆ. ನನಗೆ ಹೇಳದೆಯೇ ನನ್ನ ಕ್ಷೇತ್ರ ಅರಸೀಕೆರೆ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿದ್ದಾರೆ ಎಂದು ಜೆಡಿಎಸ್ ನಾಯಕರ ವಿರುದ್ಧ ಶಾಸಕ ಶಿವಲಿಂಗೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಲಿಗೇಗೌಡ, ಫೆಬ್ರವರಿ 12ರಂದು ಕ್ಷೇತ್ರದಲ್ಲಿ ಸಮಾವೇಶ ಮಾಡುತ್ತಿದ್ದಾರೆ. ನಾನು ಮೊದಲು ಸಮಾವೇಶ ಮಾಡಬೇಕಿತ್ತು. ಒಬ್ಬ ವ್ಯಕ್ತಿ ನನಗೇ ಅರಸಿಕೆರೆ ಟಿಕೆಟ್ ಅಂತಾ ಓಡಾಡುತ್ತಿದ್ದಾರೆ. ಇದನ್ನು ನೋಡಿದರೆ ನಾಮಕಾವಸ್ತೆಗೆ ನನ್ನನ್ನು ಕರೆಯುತ್ತಿದ್ದಾರೆ ಅನ್ಸುತ್ತೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ. ಕ್ಷೇತ್ರದ ಜನ ಹೇಳಿದಂತೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಜನರಿಗೆ ಹೇಳದೇ ಯಾವ ನಿರ್ಧಾರವನ್ನೂ ಮಾಡಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular