HomeKarnatakaBREAKING: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

BREAKING: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೇಂದ್ರ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ನಿವೇಶನ ಹಂಚಿಕೆಯಲ್ಲಿ ಅಕ್ರಮ, ಪರಿಹಾರ ನೀಡುವಲ್ಲಿಯೂ ಅವ್ಯವಹಾರ, ಲೇಔಟ್ ನಿರ್ಮಾಣದಲ್ಲಿಯೂ ಅಕ್ರಮ ಸೇರಿದಂತೆ ಹಲವು ಆರೋಪ, ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ವೈಯ್ಯಾಲಿ ಕಾವಲ್ ನಲ್ಲಿರುವ ಬಿಡಿಎ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಡಿಎ ಅಕ್ರಮದ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲಿ 35 ಲೋಕಾಯುಕ್ತ ಅಧಿಕಾರಿಗಳು ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿದ್ದು, ಕಚೇರಿಯ ನಾಲ್ಕು ಬಾಗಿಲುಗಳನ್ನು ಮುಚ್ಚಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular