
ವಿಜಯಪುರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ. ನಮ್ಮ ಸರ್ಕಾರದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೆವು. ಎಲ್ಲವನ್ನೂ ಮುಸ್ಲಿಂರಿಗೆ ಮಾತ್ರ ಕೊಟ್ಟಿದ್ದೆವಾ? ಮುಸ್ಲಿಂ ಹಾಗೂ ಹಿಂದೂಗಳಿಗೆ ಇಬ್ಬರಿಗೂ ಕೊಡಲಾಗಿತ್ತು. ಬಿಜೆಪಿ ಸರ್ಕಾರಕ್ಕೆ ಭ್ರಷ್ಟಾಚಾರ, ನಿರುದ್ಯೋಗ ಸಮಸ್ಯೆ ಬಗೆಹರಿಸಲು ಆಗಿಲ್ಲ, ರೈತರ ಸಮಸ್ಯೆಗೂ ಪರಿಹಾರ ಒದಗಿಸಲಾಗಿಲ್ಲ ಎಂದು ಗುಡುಗಿದ್ದಾರೆ.
ಇದೇ ವೇಳೆ ಕನ್ನಡ ಭಾಷೆ, ನೆಲ, ಜಲಕ್ಕಾಗಿ ಹೋರಾಟ ಮಾಡಿದವರ ಮೇಲೆ ಕೇಸ್ ಹಾಕುವುದು ಸರಿಯಲ್ಲ, ಹೋರಾಟಗಾರರ ಮೇಲೆ ರೌಡಿ ಶೀಟರ್ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಹೇಳಿದರು.

