HomeKarnatakaBIG NEWS: ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿ ಶೀಟರ್ ಓಪನ್; ಕೇಸ್ ಹಿಂಪಡೆಯದಿದ್ದರೆ ಪ್ರತಿಭಟನೆ ಎಚ್ಚರಿಕೆ

BIG NEWS: ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿ ಶೀಟರ್ ಓಪನ್; ಕೇಸ್ ಹಿಂಪಡೆಯದಿದ್ದರೆ ಪ್ರತಿಭಟನೆ ಎಚ್ಚರಿಕೆ

ಬೆಳಗಾವಿ: ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿ ಶೀಟರ್ ಓಪನ್ ಮಾಡಿರುವ ಪ್ರಕರಣ ಸಂಬಂಧ, ಕೇಸ್ ಹಿಂಪಡೆಯುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.

ಈ ಬಗ್ಗೆ ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಕನ್ನಡಪರ ಸಂಘಟನೆ ಮುಖಂಡರ ಸಭೆ ನಡೆದುದ್ದು, ಕೇಸ್ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಕನ್ನಡ ಭಾಷೆ, ನೆಲ ಜಲಕ್ಕಾಗಿ ಹೋರಾಡುತ್ತಿರುವವರ ವಿರುದ್ಧ ದಾಖಲಾಗಿರುವ ಕೇಸ್ ಪೊಲೀಸ್ ಇಲಾಖೆ ಹಿಂಪಡೆಯುವಂತೆ ಒತ್ತಾಯಿಸಿ ನಾಳೆ ಬೆಳಗಾವಿ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಒಂದು ವೇಳೆ ಪ್ರಕರಣ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಎಚ್ಚರಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular