HomeKarnatakaBIG NEWS: ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಬಾಣಗೆರೆ ಬಳಿ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದು, ಚಿಕ್ಕ ಹುಲಿಕುಂಟೆಯ ಅನಿಲ್, ಆಂಧ್ರಪ್ರದೇಶದ ಶ್ರೀಧರ್ ಮೃತ ದುರ್ದೈವಿಗಳು. ಸೌತೆಕಾಯಿ ವ್ಯಾಪಾರ ಕೇಂದ್ರಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular