HomeKarnatakaBIG NEWS: ಶಾಸಕ ಶಿವಲಿಂಗೇಗೌಡರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

BIG NEWS: ಶಾಸಕ ಶಿವಲಿಂಗೇಗೌಡರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಹಾಸನ: ಕಳೆದ ಮೂರು ವರ್ಷಗಳಿಂದ ಜೆಡಿಎಸ್ ಚಿಹ್ನೆ ಅಂದ್ರೆ ಶಿವಲಿಂಗೇಗೌಡರಿಗೆ ಅಲರ್ಜಿಯಾಗಿದೆ. ಅರಸಿಕೆರೆಯಲ್ಲಿ ಮಹಾನುಭಾವರೊಬ್ಬರು ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಅದೆಲ್ಲದಕ್ಕೂ ಇತಿಶ್ರೀ ಹಾಡಬೇಕಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆ ಅರಸಿಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, 2 ವರ್ಷದಿಂದ ಶಿವಲಿಂಗೇಗೌಡರು ಪಕ್ಷದ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ, 2 ವರ್ಷದ ಹಿಂದೆಯೇ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ ಎಂದು ಹೇಳಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದಿದ್ದಾರೆ. ಅವರು ಸತ್ಯ ಹೇಳಿದ್ದಾರೆ. ಆದರೆ ಇವರು ಸತ್ಯ ಒಪ್ಪಿಕೊಳ್ಳುತ್ತಿಲ್ಲ. ಇದೆಲ್ಲದಕ್ಕೂ ಇತಿಶ್ರೀ ಹಾಡಬೇಕಿದೆ ಎಂದು ಹೇಳಿದ್ದಾರೆ. ಒಟ್ಟಾರೆ ಇಂದು ನಡೆಯಲಿರುವ ಜೆಡಿಎಸ್ ಸಮಾವೇಶದಲ್ಲಿ ಅರಸಿಕೆರೆ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular