ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಿಂತಿದ್ದ ಎರಡು ಕಾರುಗಳಿಗೆ ಬೆಂಕಿ ಹೊತ್ತಿ ಉರಿದ ಘಟನೆ ಪ್ಯಾಲೇಸ್ ಗ್ರೌಂಡ್ ಬಳಿ ನಡೆದಿದೆ.
ಪ್ಯಾಲೇಸ್ ಗ್ರೌಂಡ್ ನ 4, 5ನೇ ಗೇಟ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ನೋಡ ನೋಡುತ್ತಿದ್ದಂತೆ ಬೆಂಕಿಗಾಹುತಿಯಾಗಿದೆ. ಪ್ಯಾಲೇಸ್ ಗ್ರೌಂಡ್ ಗೇಟ್ ಬಳಿ ಕಾರು ನಿಲ್ಲಿಸಿ ಕಾರಿನ ಮಾಲೀಕರು ಮದುವೆಗೆ ಹೋಗಿದ್ದರು. ಮಾಲೀಕರು ಬರುವಷ್ಟರಲ್ಲಿ ಕಾರು ಸುಟ್ಟು ಭಸ್ಮವಾಗಿದ್ದು, ಆಘಾತಗೊಂಡಿದ್ದಾರೆ.
ಕಾರಿಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಸದಾಶಿವನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.