ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಯಾರಿಕೆಗೆ ಮಕ್ಕಳಿಂದ ತಲಾ 60 ರೂಪಾಯಿ ಸಂಗ್ರಹಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿದೆ.
2022 -23ನೇ ಸಾಲಿನ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲು ಪ್ರತಿ ಮಕ್ಕಳಿಂದ 60 ರೂ. ಶುಲ್ಕ ಸಂಗ್ರಹಿಸಲು ಸೂಚಿಸಲಾಗಿದ್ದು, ಪೋಷಕರು, ಶಿಕ್ಷಕರ ವಲಯದಿಂದ ವಿರೋಧ ವ್ಯಕ್ತವಾಗಿದೆ. ರಾಜ್ಯಮಟ್ಟದಲ್ಲಿ ನಡೆಯುತ್ತಿದ್ದ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಜವಾಬ್ದಾರಿಯನ್ನು ಈ ಬಾರಿ ಬಿಇಒ ಗಳಿಗೆ ನೀಡಲಾಗಿದೆ.
ತಾಲೂಕು ಮಟ್ಟದಲ್ಲಿಯೇ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ತಯಾರಾಗಲಿದ್ದು, ಈ ಹಿಂದೆ ಮಕ್ಕಳಿಂದ ಶುಲ್ಕ ಸಂಗ್ರಹಿಸುತ್ತಿರಲಿಲ್ಲ. ಈ ಬಾರಿ ಶುಲ್ಕ ಸಂಗ್ರಹಿಸಲು ಸೂಚನೆ ನೀಡಲಾಗಿದೆ. ರಾಜ್ಯದ ಸುಮಾರು 5 ಲಕ್ಷಕ್ಕೂ ಅಧಿಕ ಮಕ್ಕಳು ತಲಾ 60 ರೂಪಾಯಿ ಪಾವತಿಸುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಹೇಳಲಾಗಿದೆ.