ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಶಾಫಿ ಬೆಳ್ಳಾರೆ ಅವರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್.ಡಿ.ಪಿ.ಐ. ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ.
ಎಸ್.ಡಿ.ಪಿ.ಐ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸಮ್ಮುಖದಲ್ಲಿ ನಡೆದ ಪುತ್ತೂರು ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
ಅವರನ್ನೇ ಪುತ್ತೂರು ಕ್ಷೇತ್ರದಿಂದ ಕಣಕ್ಕೆ ಇಳಿಸಲು ಈ ಹಿಂದೆಯೇ ನಿರ್ಧರಿಸಲಾಗಿತ್ತು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶಾಫಿ ಬಂಧಿತರಾಗಿ ಜೈಲು ಸೇರಿದ್ದು, ಈ ಹಿಂದಿನ ತೀರ್ಮಾನದಂತೆ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.