HomeKarnatakaBIG NEWS: ಹೊಸಕೋಟೆಯಲ್ಲಿ ಜೋರಾದ ಆಪರೇಷನ್ ಕಮಲ; ಮೂಲ ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆ

BIG NEWS: ಹೊಸಕೋಟೆಯಲ್ಲಿ ಜೋರಾದ ಆಪರೇಷನ್ ಕಮಲ; ಮೂಲ ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆ

ಹೋಸಕೋಟೆ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೈ ಪಡೆಗಳಿಗೆ ಮೂಲ ಕಾಂಗ್ರೆಸ್ಸಿಗರು ಬಿಗ್ ಶಾಕ್ ನೀಡಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಮೂಲ ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ಸಿಗರು ಸಚಿವ ಎಂಟಿಬಿ ನಾಗರಾಜ್ ನೇತೃತ್ವದಲ್ಲಿ ಹಲವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಮೊನ್ನೆಯಷ್ಟೇ ಶಾಸಕ ಶರತ್ ಬಚ್ಚೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೇಮಂತ್, ವೆಂಕಟೇಶ್ ಸೇರಿದಂತೆ ಹಲವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಹೊಸಕೋಟೆಯಲ್ಲಿ ಆಪರೆಷನ್ ಕಮಲ ಜೋರಾಗಿದ್ದು, ಶಾಸಕ ಶರತ್ ನನ್ನು ಸೋಲಿಸಲು ಎಂಟಿಬಿ ನಾಗರಾಜ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular